ಘರ್ಷಣೆ ಮತ್ತು ಸೌಹಾರ್ದತೆ,ಆಯ್ಕೆ ನಿಮ್ಮದು, ನಮ್ಮದು……
Taluknewsmedia.comಘರ್ಷಣೆ ಮತ್ತು ಸೌಹಾರ್ದತೆ,ಆಯ್ಕೆ ನಿಮ್ಮದು, ನಮ್ಮದು…… ಗೌರಿ ಗಣೇಶ ಹಬ್ಬ ಸಂಭ್ರಮದ ಸಾಂಸ್ಕೃತಿಕ ಉತ್ಸವವಾಗಲಿ – ಅದು ಕೋಮು ದ್ವೇಷದ ಗಲಭೆಕೋರ ಮನಸ್ಥಿತಿ ಆಗದಿರಲಿ…… ಇದು ಹಿಂದು – ಮುಸ್ಲಿಮ್ ಎಂದಾಗದೆ ಭಾರತೀಯ ಹಬ್ಬವಾಗಲಿ ಎಂದು ಮನವಿ ಮಾಡಿಕೊಳ್ಳುತ್ತಾ…… ಸಾಮಾನ್ಯವಾಗಿ ಗಣೇಶ ಹಬ್ಬವು ವೈಯಕ್ತಿಕತೆಯ ಜೊತೆಗೆ ಅನೇಕ ಸಂಘ ಸಂಸ್ಥೆಗಳು ಗುಂಪು ಗುಂಪಾಗಿ ಸಾರ್ವಜನಿಕ ಸ್ಥಳಗಳಲ್ಲಿ ಒಂದು ಉತ್ಸವವಾಗಿ ಆಚರಿಸಲ್ಪಡುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ರಾಜಕೀಯ ಕಾರಣದಿಂದಾಗಿ ಒಂದು ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಿದೆ. ಎರಡು ಬಹುಮುಖ್ಯ ಕಾರಣಗಳಿಗಾಗಿ ಈ ಸಂದರ್ಭದಲ್ಲಿ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ. ಗಣೇಶನನ್ನು ಪ್ರತಿಷ್ಠಾಪಿಸುವ ಜಾಗ ಮತ್ತು ಮೆರವಣಿಗೆಯ ಹಾದಿ ಇಲ್ಲಿ ಪರಿಸ್ಥಿತಿಯನ್ನು ಉದ್ವಿಗ್ನ ಗೊಳಿಸುತ್ತದೆ. ಮುಖ್ಯವಾಗಿ ಹಿಂದೂ ಮುಸ್ಲಿಮರ ನಡುವೆ…. ವಿಶ್ವದ ಬೃಹತ್ ಭೌಗೋಳಿಕ ಪ್ರದೇಶ ಹೊಂದಿರುವ ದೇಶಗಳಲ್ಲಿ ಭಾರತವೂ ಒಂದು. ಬಹುಶಃ ಏಳನೆಯ ಸ್ಥಾನ ಇರಬೇಕು. ಒಂದು…
ಮುಂದೆ ಓದಿ..
