ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆ ಆರ್ಭಟ ಮುಂದುವರಿದಿದ್ದು
Taluknewsmedia.comಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆ ಆರ್ಭಟ ಮುಂದುವರಿದಿದ್ದು, ಕಳಸ ಪಟ್ಟಣದಲ್ಲಿ ಸಿಡಿಲು ಬಡಿದ ಪರಿಣಾಮ ಎಲೆಕ್ಟ್ರೀಷಿಯನ್ ಒಬ್ಬರು ದುರ್ಮರಣ ಹೊಂದಿರುವ ಘಟನೆ ವರದಿಯಾಗಿದೆ. ಮೃತರನ್ನು ಮೊಹಮ್ಮದ್ ಇಸ್ಮಾಯಿಲ್ (42) ಎಂದು ಗುರುತಿಸಲಾಗಿದೆ. ಅವರು ಕಳಸ ಪಟ್ಟಣದ ನಿವಾಸಿಯಾಗಿದ್ದು, ನಿರ್ಮಾಣ ಹಂತದಲ್ಲಿದ್ದ ಮನೆಯೊಂದರಲ್ಲಿ ವಿದ್ಯುತ್ ವೈರ್ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಂಜೆ ವೇಳೆಯಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದ ವೇಳೆ ಅಕಸ್ಮಾತ್ ಸಿಡಿಲು ಬಡಿದು ಇಸ್ಮಾಯಿಲ್ ಅವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯ ನಂತರ ಕಳಸ ಪಟ್ಟಣದ ಜನರು ಬೆಚ್ಚಿಬಿದ್ದಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಗುಡುಗು ಮಿಂಚು ಸಹಿತ ಮಳೆ ಸುರಿಯುತ್ತಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಮಳೆ ಮತ್ತು…
ಮುಂದೆ ಓದಿ..
