ಪಿಕೆಪಿಎಸ್ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಭೆ: ರನ್ನಬೆಳಗಲಿಯಲ್ಲಿ ಉದ್ವಿಗ್ನತೆ
Taluknewsmedia.comಪಿಕೆಪಿಎಸ್ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಭೆ: ರನ್ನಬೆಳಗಲಿಯಲ್ಲಿ ಉದ್ವಿಗ್ನತೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಭೆಯಿಂದ ಗ್ರಾಮದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 29ರಂದು ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ವಾಗ್ವಾದ ತೀವ್ರಗೊಂಡು, ಅದು ಬಳಿಕ ಕೈಕಾಲು ಬೀಸಿ ಹೊಡೆದಾಟಕ್ಕೆ ತಿರುಗಿದೆ. ಎರಡು ಪಕ್ಷದ ಕಾರ್ಯಕರ್ತರು ಪರಸ್ಪರಕ್ಕೆ ಕೋಲುಗಳಿಂದ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪಿಕೆಪಿಎಸ್ ಕಚೇರಿ ಮುಂದೆ ನಡೆದ ಈ ಘಟನೆ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ, ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಪೊಲೀಸರ ಸಮಯೋಚಿತ ಕ್ರಮದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಚುನಾವಣೆಯಲ್ಲಿ ಒಟ್ಟು 13 ಸದಸ್ಯರ ಪೈಕಿ 6…
ಮುಂದೆ ಓದಿ..
