ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 106ನೇ ಸಂಸ್ಥಾಪನಾ ವಾರ್ಷಿಕೋತ್ಸವ
Taluknewsmedia.comಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 106ನೇ ಸಂಸ್ಥಾಪನಾ ವಾರ್ಷಿಕೋತ್ಸವ ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 106ನೇ ಸಂಸ್ಥಾಪನಾ ವಾರ್ಷಿಕೋತ್ಸವವನ್ನು ನಗರದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಅಧ್ಯಕ್ಷರು, ಸಂಸ್ಥೆಯ 106ನೇ ವರ್ಷಾಚರಣೆಯನ್ನು ಕೇಂದ್ರ ಕಚೇರಿ ಸೇರಿದಂತೆ ಜಿಲ್ಲೆಯಾದ್ಯಂತ ಇರುವ 33 ಶಾಖೆಗಳಲ್ಲಿ ಸಂಭ್ರಮದಿಂದ ಆಚರಿಸುವಂತೆ ಸೂಚನೆ ನೀಡಲಾಗಿತ್ತು ಎಂದು ಹೇಳಿದರು. ಬ್ಯಾಂಕ್ ಈ ಮಟ್ಟಿಗೆ ಬೆಳೆಯಲು ಕಾರಣವಾದ ಹಿಂದಿನ ಎಲ್ಲ ಅಧ್ಯಕ್ಷರ ದೂರದೃಷ್ಟಿ, ಆಡಳಿತ ಮಂಡಳಿಗಳ ಸಮರ್ಪಿತ ಸೇವೆ ಹಾಗೂ ಸಿಬ್ಬಂದಿಯ ನಿಸ್ವಾರ್ಥ ಪರಿಶ್ರಮವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಬಿ, ಕೇಂದ್ರ ಕಚೇರಿಯ ವಿವಿಧ ವಿಭಾಗಗಳ ಉಪ ಪ್ರಧಾನ ವ್ಯವಸ್ಥಾಪಕರು, ಬ್ಯಾಂಕ್ ನೌಕರರು, ಸ್ಥಳೀಯ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಹಾಜರಿದ್ದರು.
ಮುಂದೆ ಓದಿ..
