ಗಾಂಜಾ ಸೇವನೆ ಮಾಡುತ್ತಿದ್ದ ಯುವಕನ ಬಂಧನ.
ಹುಬ್ಬಳ್ಳಿ, ಜೂನ್ 17, 2025: ನಗರದ ನವನಗರ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಸೇವನೆಯ ಪ್ರಕರಣ ಬೆಳಕಿಗೆ ಬಂದಿದೆ. ದಿನಾಂಕ 15-06-2025 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ರಾಹುಲ ಜಗದೀಶ ಕಾಲೇಬಾಗ (ವಯಸ್ಸು: 31), ನವನಗರದ 3ನೇ ಕ್ರಾಸ್, EWS-577 ನಿವಾಸಿಯಾಗಿ ಗುರುತಿಸಲಾಗಿದೆ. ಆರೋಪಿತನು ಹಿಂದೂ ಚಲವಾದಿ ಸಮುದಾಯದಿಂದ ಆಗಿದ್ದು, ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ.ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ರಾಹುಲನು ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ಪದಾರ್ಥವಾದ ಗಾಂಜಾ (ಮಾದಕ ಔಷಧಿ ಅಥವಾ ಮನೋಪರಿಣಾಮಕಾರಿ ವಸ್ತು) ಸೇವನೆ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಮಾಹಿತಿ ಪಡೆದ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ತಕ್ಷಣವೇ ಆರೋಪಿತನನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದೆ.ಈ ಘಟನೆಯ ಹಿನ್ನೆಲೆಯಲ್ಲಿ ನವನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರೆದಿದೆ.ಸಾಮಾಜಿಕ ಹೊಣೆಗಾರಿಕೆ ಅಗತ್ಯಇಂತಹ ಮಾದಕ ದ್ರವ್ಯಗಳ ಬಳಕೆಯು ಯುವಜನತೆಯಲ್ಲಿ ಅಹಿತಕರ ಪರಿಣಾಮಗಳನ್ನು ಉಂಟುಮಾಡುತ್ತಿರುವುದರಿಂದ,ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕೆಂದು ಅಧಿಕಾರಿಗಳು ವಿನಂತಿಸಿದ್ದಾರೆ.
ವರದಿ : ವಿಜಯಕುಮಾರ ಪ್ರಹ್ಲಾದ ಈಳಗೇರ ಗಾಮನಗಟ್ಟಿ, ಹುಬ್ಬಳ್ಳಿ ತಾಲೂಕ್ ನ್ಯೂಸ್ 9886063123

