ಸುದ್ದಿ 

ನಕಲಿ ‘ಮಫ್ತಿ’ ಬ್ರಾಂಡ್ ಬಟ್ಟೆಯ ಮಾರಾಟ: ಕಂಪನಿಯ ಪ್ರತಿನಿಧಿಯಿಂದ ಪೊಲೀಸರಿಗೆ ದೂರು.

Taluknewsmedia.com

ನಗರದ ಬಿ.ಎಸ್.ಕೆ-1ನೇ ಹಂತದ 22ನೇ ಮುಖ್ಯರಸ್ತೆಯಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ, ಪ್ರಸಿದ್ಧ ಮಫ್ತಿ (Muffthi) ಬ್ರಾಂಡ್ ಹೆಸರಿನಲ್ಲಿ ನಕಲಿ ಬಟ್ಟೆಗಳನ್ನು ಮಾರಾಟ ಮಾಡಲಾಗುತ್ತಿದ್ದು, ಕಂಪನಿಯ ಪ್ರತಿನಿಧಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೆ/ಎಸ್ ಬ್ರಾಂಡ್ ಪ್ರೋಡಕ್ಟೋರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಶ್ರೀ ಸ್ಟೀಫನ್ ರಾಜ್ ಅವರು ದಿನಾಂಕ 20.06.2025 ರಂದು ಈ ಕುರಿತು ಹನುಮಂತನಗರ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಸಲ್ಲಿಸಿದ್ದಾರೆ.


ಅವರ ಪ್ರಕಾರ, ಅಲ್ವೇಸ್ ಎಂಬ ಬಟ್ಟೆ ಅಂಗಡಿಯಲ್ಲಿ ಮಫ್ತಿ ಬ್ರಾಂಡ್ ಹೆಸರಿನಲ್ಲಿ ನಕಲಿ ಗಾರ್ಮೆಂಟ್‌ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದ್ದು, ಈ ಮೂಲಕ ಕಂಪನಿಯ ಬ್ರಾಂಡ್ ಮೌಲ್ಯವನ್ನು ಹಾನಿಗೊಳಿಸುತ್ತಿರುವುದರ ಜೊತೆಗೆ ಗ್ರಾಹಕರನ್ನೂ ಮೋಸಗೊಳಿಸಲಾಗುತ್ತಿದೆ.

ಈ ನಕಲಿ ಉತ್ಪನ್ನಗಳ ಮಾರಾಟದಿಂದ ಅಕ್ರಮವಾಗಿ ಹಣ ಸಂಪಾದನೆ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಸ್ಥೆ, ಸರಿಯಾದ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ.

ಹನುಮಂತನಗರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ಮುಂದಿನ ಕ್ರಮವಾಗಿ ತನಿಖೆ ಕೈಗೊಂಡಿದ್ದಾರೆ.

Related posts

Leave a Comment