ಸುದ್ದಿ 

ಲಾರಿ ಸ್ಟ್ಯಾಂಡ್ ಬಳಿ ಅಕ್ರಮ ಗಾಂಜಾ ಮಾರಾಟ: ಇಬ್ಬರು ಯುವಕರು ಪೊಲೀಸರ ಬಲೆಗೆ..

Taluknewsmedia.com

ನಗರದ ಲಾರಿ ಸ್ಟ್ಯಾಂಡ್ ಬಳಿಯ ರವಿತೇಜ್ ಪೆಟ್ರೋಲ್ ಬಂಕ್ ಹತ್ತಿರದ ಖಾಲಿ ಜಾಗದಲ್ಲಿ ಅಕ್ರಮ ಗಾಂಜಾ ಸಾಗಣೆ ಮತ್ತು ಮಾರಾಟ ನಡೆಯುತ್ತಿದೆಯೆಂಬ ಖಚಿತ ಮಾಹಿತಿಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

R. M. C ಯಾರ್ಡ್ ಯ ಪೊಲೀಸ್ ಅಧಿಕಾರಿಗಳು ದಿನಾಂಕ 19/06/2025 ರಂದು ಸಂಜೆ ಸುಮಾರು 7.30ರ ಸುಮಾರಿಗೆ ಗಸ್ತಿನಲ್ಲಿ ಇದ್ದಾಗ, ಬಾತ್ಮಿದಾರರಿಂದ ದೊರೆತ ಖಚಿತ ಮಾಹಿತಿಯ ಮೇರೆಗೆ ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಅಲ್ಲಿಗೆ ಬೇಟಿ ನೀಡಿದಾಗ, ರಾಜುಕುಮಾರ್ ಮತ್ತು ಸೌರವ್ ಎಂಬ ಇಬ್ಬರು ವ್ಯಕ್ತಿಗಳು ಮಾಧಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ತಮ್ಮ ವಶದಲ್ಲಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ದೃಢಪಟ್ಟಿದೆ.

ಈ ಮೂಲಕ ಅವರು ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದರೆಂದು ತಿಳಿದುಬಂದಿದ್ದು, ಸಾಮಾಜಿಕ ಸ್ವಾಸ್ಥ್ಯತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಕ್ರಿಯೆಯಲ್ಲಿ ತೊಡಗಿದ್ದರು ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಸಂಬಂಧಿತ ವಿಧಾನದಡಿ ಕೇಸು ದಾಖಲಾಗಿದೆ ಮತ್ತು ಮುಂದಿನ ತನಿಖೆ ಪ್ರಾರಂಭವಾಗಿದೆ.

ಪೊಲೀಸರು ನಾಗರಿಕರಲ್ಲಿ ಎಚ್ಚರಿಕೆ ವಹಿಸಲು ಹಾಗೂ ಇಂತಹ ಅನೈತಿಕ ಚಟುವಟಿಕೆಗಳನ್ನು ತಡೆಯಲು ಸಹಕರಿಸುವಂತೆ ವಿನಂತಿಸಿದ್ದಾರೆ.

Related posts