ಸುದ್ದಿ 

ಅಜ್ಞಾತ ವ್ಯಕ್ತಿಯ ಮೃತದೇಹ ಪತ್ತೆ: ಪೊಲೀಸರು ತನಿಖೆ ಆರಂಭಿಸಿದ್ದಾರೆ

Taluknewsmedia.com

ಬೆಂಗಳೂರು, ಜೂನ್ 25: ನಗರದ ಹೊರವಲಯದಲ್ಲಿನ ಎಂಜಿಯಾರ್ ಲೇಔಟ್ ಬಳಿ ಶಂಕಾಸ್ಪದ ಸ್ಥಿತಿಯಲ್ಲಿ ಒಂದು ಅಜ್ಞಾತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಘಟನೆ ಮಂಗಳವಾರ (17/06/2025) ಮಧ್ಯಾಹ್ನ 1:15ರ ಸುಮಾರಿಗೆ ಸಂಭವಿಸಿದೆ.

ಪ್ರತಿಯಕ್ಷಿಗಳ ಮಾಹಿತಿ ಮೇರೆಗೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹದ ಪಕ್ಕದಲ್ಲಿ ಕೆಲವು ವಸ್ತುಗಳು ಹಾಗೂ ಗಾಯದ ಗುರುತುಗಳು ಕಂಡುಬಂದಿವೆ. ಘಟನೆಯ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಶಂಕಾಜನಕ ಮರಣ ಎಂದು ಯು.ಡಿ. (Unnatural Death) ಪ್ರಕರಣ ದಾಖಲಿಸಿಕೊಂಡಿದೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ, ಮೃತ ವ್ಯಕ್ತಿಯು ಯಾರು ಎಂಬುದರ ಕುರಿತು ಮಾಹಿತಿ ನೀಡುವಂತೆ ವಿನಂತಿಸಲಾಗಿದೆ. ಯಲಹಂಕ ಪೊಲೀಸ್ ಠಾಣೆ ಉಪನಗರ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಮತ್ತು ಮೃತದೇಹವನ್ನು ಪೋಸ್ಟ್‌ಮಾರ್ಟಂಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ

Related posts