ಸುದ್ದಿ 

ವೈದೇಹಿ ಮೆಡಿಕಲ್ ಅಕಾಡೆಮಿ ಬಳಿಯ ಅಂಗಡಿಯಲ್ಲಿ ಸಾರ್ವಜನಿಕ ತಂಬಾಕು ಮಾರಾಟ: ಎಫ್‌ಐಆರ್ ದಾಖಲೆ

Taluknewsmedia.com

ರಾಜೀವ್ ಗಾಂಧಿ ನಗರ ಎನ್.ಟಿ.ಐ ಲೇಔಟ್ ಬಳಿಯ ವೈದೇಹಿ ಮೆಡಿಕಲ್ ಅಕಾಡೆಮಿ ಇನ್‌ಸ್ಟಿಟ್ಯೂಟ್ ಸಮೀಪದ ಅಂಗಡಿಯಲ್ಲಿ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿರುವ ಬಗ್ಗೆ ಪೋಲೀಸರಿಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ನಂತರ ಪ್ರಕರಣ ದಾಖಲಿಸಿದ್ದಾರೆ.

ದಿನಾಂಕ 23/06/2025 ರಂದು ಎರಡು ಬಗ ಮತ್ತು ಹಗಲು ಶಿಫ್ಟ್ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿ, ತಮ್ಮ ವರದಿಯನ್ನು ಠಾಣಾ ಉಸ್ತುವಾರಿ ಅಧಿಕಾರಿಗಳಿಗೆ ಸಲ್ಲಿಸಿ, ಠಾಣಾ ವ್ಯಾಪ್ತಿಯಲ್ಲಿನ ಡೇ ರೌಂಡ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಈ ಸಂದರ್ಭದಲ್ಲಿ ಬಾತ್ಮೀದಾರರಿಂದ ದೊರೆತ ಮಾಹಿತಿಯಂತೆ, ಗಾಂಧಿ ಕೃಷಿ ವಿಶ್ವವಿದ್ಯಾನಿಲಯದ ಹತ್ತಿರದ ಅಂಗಡಿಯೊಂದರಲ್ಲಿ ಸಾರ್ವಜನಿಕವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿತು.

ಕೊಡಿಗೆಹಳ್ಳಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಮಾರಾಟ ನಡೆಯುತ್ತಿರುವುದು ದೃಢಪಟ್ಟಿತು. ಪೊಲೀಸರು ತಕ್ಷಣವೇ ಠಾಣೆಗೆ ಮರಳಿ ಬಂದು, NCR ನಂ-107/2025 ರಂತೆ ಪ್ರಕರಣ ದಾಖಲಿಸಿ, ನ್ಯಾಯಾಲಯದ ಅನುಮತಿ ಪಡೆದು ಕ್ರಮ ಕೈಗೊಂಡಿದ್ದಾರೆ. ತನಿಖೆಗಾಗಿ HC-11462 ಅವರನ್ನು ನಿಯೋಜಿಸಿ, ಮುಂದಿನ ಕ್ರಮ ಜರುಗಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟದ ವಿರುದ್ಧದ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

Related posts