92 ವರ್ಷಗಳ ಇತಿಹಾಸದಲ್ಲಿ ದಾಖಲೆ: ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲೇ ಭರ್ತಿ..
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಣೆ ..
ಜಿಲ್ಲೆಯ ಪ್ರಮುಖ ಜಲಸಂಚಯ ಕೇಂದ್ರವಾದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆ, ಅದರ 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿಯೇ ಸಂಪೂರ್ಣವಾಗಿ ಭರ್ತಿಯಾದ ದಾಖಲೆ ಸೃಷ್ಟಿಸಿದೆ. ಈ ಮಹತ್ವದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು.ಸಿಎಂ ಮತ್ತು ಡಿಸಿಎಂ ಅವರು ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ, ಜಲದ ಮಹತ್ವ ಮತ್ತು ಕಾವೇರಿ ನದಿಯ ಸಾಂಸ್ಕೃತಿಕ ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಪುನರುಚ್ಛರಿಸಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಎನ್. ಚಲುವರಾಯಸ್ವಾಮಿ, ಡಾ. ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಎನ್.ಎಸ್. ಬೋಸ್ ರಾಜು, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ರವಿ ಗಣಿಗ, ಉದಯ್, ಹರೀಶ್ ಗೌಡ, ರವಿಶಂಕರ್, ಎ.ಆರ್. ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ ಹಾಗೂ ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ತಮ್ಮಯ್ಯ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು.ಜೂನ್ ತಿಂಗಳಲ್ಲಿ ಅಣೆಕಟ್ಟೆ ಭರ್ತಿಯಾಗಿರುವುದು ಈ ಬಾರಿ ಭಾರಿ ಮಳೆಪಾತ ಮತ್ತು ಸರಿಯಾದ ನಿರ್ವಹಣೆಯ ಫಲಿತಾಂಶವೆಂದು ಅಧಿಕಾರಿಗಳು ಹೇಳಿದ್ದಾರೆ.

