ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ಪ್ರಕರಣ: ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ಜುಲೈ 14:2025
ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಯಮಬದ್ಧ ಅನುಮತಿ ಪಡೆಯದೇ ಧ್ವನಿವರ್ಧಕ ಉಪಯೋಗಿಸಿದ ಪ್ರಕರಣವೊಂದು ದಾಖಲಾಗಿದೆ. ಈ ಸಂಬಂಧ ಅ. ಸಂಚಲನ ರಚಿಸಿದ ಘಟನೆ 23/06/2025 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿದ್ಯಾನಗರ ಕ್ರಾಸ್ ಬಳಿ ನಡೆದಿದ್ದು, ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿ ತಮೇಶ್ ಗೌಡ, ಹನುಮಂತೇಗೌಡ ಮತ್ತು ರವಿ ಎಂಬವರು ಆರೋಪಿಗಳಾಗಿ ಹೆಸರಿಸಲಾಗಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಸಾರ್ವಜನಿಕ ಸ್ಥಳವಾದ ರಾಜಕಾಲುವೆ ಬಳಿ ಧ್ವನಿವರ್ಧಕ ಬಳಸಿ ಭಾಷಣ ಮಾಡಿದ್ದು, ಯಾವುದೇ ಕಾನೂನುಬದ್ಧ ಅನುಮತಿ ಪಡೆದುಕೊಂಡಿಲ್ಲ. ಇದರೊಂದಿಗೆ ಸಾರ್ವಜನಿಕ ಅಶಾಂತಿಗೆ ಕಾರಣವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಕರಣವನ್ನು ನ್ಯಾಯಾಲಯದ ಆದೇಶದಂತೆ ದಾಖಲಿಸಲಾಗಿದೆ.
ಈ ಸಂಬಂಧ FIR ಸಂಖ್ಯೆ 67/2025 ಅನ್ನು ದಾಖಲಿಸಲಾಗಿದ್ದು, ಆರೋಪಿಗಳು ಬಳಸಿದ ವಾಹನ ಸಂಖ್ಯೆ KA04AE7170 ಕೂಡ ಪ್ರಕರಣಕ್ಕೆ ಸೇರಿಸಲಾಗಿದೆ. ಪೊಲೀಸರು ಪ್ರಕರಣದ ಮುಂದಿನ ತನಿಖೆ ಮುಂದುವರೆಸಿದ್ದಾರೆ.

