ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು, ಜುಲೈ 19:2025
ಮುತ್ತುಗದಹಳ್ಳಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ 56 ವರ್ಷದ ಷಣ್ಮುಗೆ ಕುಮಾರ್ ಎಂಬುವವರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಾಯಗೊಂಡಿದ್ದಾರೆ.
ಅವರು ಪ್ರತಿ ದಿನ ವಾಕಿಂಗ್ ಹೋಗುವವರಾಗಿದ್ದು, 17/07/2025 ರಂದು ಬೆಳಗ್ಗೆ 7:45ರ ವೇಳೆ ಮುತ್ತುಗದಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವಾಗ, KA05 EZ 7604 ನಂಬರಿನ ಮೋಟಾರ್ ಸೈಕಲ್ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಓಡಿಸಿ ಡಿಕ್ಕಿ ಹೊಡೆದಿದ್ದಾನೆ.
ಘಟನೆಯ ನಂತರ ಸಾರ್ವಜನಿಕರು ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ದೂರಿನ ಆಧಾರದ ಮೇಲೆ 281, 125(A) BNS rw 187 IMV ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರಾಜನಕುಂಟೆ ಪೊಲೀಸರು ಮುಂದಿನ ತನಿಖೆ ಮುಂದುವರೆಸುತ್ತಿದ್ದಾರೆ.

