ಬೈಕ್ ಮತ್ತು ಕಾರು ನಡುವೆ ಅಪಘಾತ: ವ್ಯಕ್ತಿಗೆ ಗಂಭೀರ ಗಾಯ
ಬೆಂಗಳೂರು, ಆಗಸ್ಟ್ 5:2025
ನಗರದ ಒಂದು ಪ್ರಮುಖ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ 38 ವರ್ಷದ ಶ್ರೀಧರ್ ಎಂಬವರು ಬೆಳಿಗ್ಗೆ ಸುಮಾರು 11 ಗಂಟೆಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ, ವೇಗವಾಗಿ ಬಂದ ಮಾರುತಿ ಸುಜುಕಿ ವ್ಯಾಗನ್ ಆರ್ ಕಾರು (ನಂಬರ್ KA 02 AB 22858) ಡಿಕ್ಕಿ ಹೊಡೆದಿದೆ. ಪರಿಣಾಮ, ಅವರು ರಸ್ತೆಗೆ ಬಿದ್ದು, ಇಬ್ಬರು ಕೈಗಳು, ಭುಜ ಮತ್ತು ಎದೆಗೆ ಗಂಭೀರ ಗಾಯಗಳಾಗಿದೆ.
ಅಪಘಾತವನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ಶ್ರೀಧರ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಹೆಬ್ಬಾಳದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಕಾರು ಚಾಲಕ ಮೊಹಮ್ಮದ್ ಶಮಿಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಯಲಹಂಕ ಉಪನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

