ಆನೇಕಲ್‌ನಲ್ಲಿ ಕಾಲೇಜುಗೆ ಹೋದ ಯುವತಿ ನಾಪತ್ತೆ
ಆನೇಕಲ್, ಆಗಸ್ಟ್ 5:
ಕಾಲೇಜಿಗೆ ಸರ್ಟಿಫಿಕೇಟ್ ತೆಗೆದುಕೊಳ್ಳಲು ಹೋಗಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಪೋಷಕರು ಆಕೆಯಿಗಾಗಿ ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಮಾಹಿತಿ ದೊರೆತಿಲ್ಲ. ಈ ಸಂಬಂಧ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೂರು ಮಕ್ಕಳ ಪೋಷಕರಾದ , ಶಾಹಿ ಬಾ ಅವರ ತಮ್ಮ ಕೊನೆಯ ಮಗಳಾದ ಸುಮಯ್ಯ ವಹಾಬ್ ಅವರು 04/08/2025 ರಂದು ಬೆಳಗ್ಗೆ 7 ಗಂಟೆಗೆ “ಕಾಲೇಜಿಗೆ ಹೋಗಿ ಸರ್ಟಿಫಿಕೇಟ್ ತರುತ್ತೇನೆ” ಎಂದು ಮನೆಯಿಂದ ಹೊರಟಿದ್ದಾಗಿ ತಿಳಿಸಿದ್ದಾರೆ. ಆದರೆ ಆಕೆ ಮತ್ತೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ.
ಆಕೆಯನ್ನು ಸ್ನೇಹಿತರು, ಸಂಬಂಧಿಕರು ಮತ್ತು ಕಾಲೇಜು ಬಳಿ ಹುಡುಕಿದರೂ ಪತ್ತೆಯಾಗಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಮಧ್ಯಾಹ್ನ 3 ಗಂಟೆಗೆ ಸರ್ಜಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಯುವತಿ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸರ್ಜಾಪುರ ಪೊಲೀಸ್ ಠಾಣೆಯನ್ನು ತಕ್ಷಣ ಸಂಪರ್ಕಿಸಲು ಸಾರ್ವಜನಿಕರಿಗೆ ವಿನಂತಿಸಲಾಗಿದೆ.

