ಸುದ್ದಿ 

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ನವವಿವಾಹಿತೆಯ ದುರ್ಘಟನೆ!

Taluknewsmedia.com

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ನವವಿವಾಹಿತೆಯ ದುರ್ಘಟನೆ!

ಚಿಕ್ಕಬಳ್ಳಾಪುರ ಜಿಲ್ಲೆ, ಗುಡಿಬಂಡೆ ತಾಲೂಕು — ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ನವವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ಕೆ.ಎಸ್. ಜಯಶ್ರೀ (30) ಎಂದು ಗುರುತಿಸಲಾಗಿದೆ. ಕೇವಲ ಆರು ತಿಂಗಳ ಹಿಂದಷ್ಟೇ ಶಿಡ್ಲಘಟ್ಟ ತಾಲ್ಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ ಎಂಬಾತನೊಂದಿಗೆ ವಿವಾಹವಾಗಿದ್ದಳು.

ಮನೆಯ ಬಾತ್‌ರೂಮ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಜಯಶ್ರೀ, ತನ್ನ ಫೇಸ್‌ಬುಕ್ ಖಾತೆಯಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಡೆತ್ ನೋಟ್‌ನಲ್ಲಿ ಪತಿ ಚಂದ್ರಶೇಖರ್‌ನ ವಿರುದ್ಧ ಗಂಭೀರ ಆರೋಪ ಮಾಡಿರುವ ಜಯಶ್ರೀ,
ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತ್ತಿದ್ದ ಎಂಬುದಾಗಿ ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು “ಚಂದ್ರಶೇಖರ್ ಬಂಧನದವರೆಗೆ ಶವ ಸಂಸ್ಕಾರ ಮಾಡಬಾರದು” ಎಂಬ ನಿಲುವು ಕೈಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಂಡಾವಲಹಳ್ಳಿ ಗ್ರಾಮದಲ್ಲಿ ಈ ಘಟನೆಯಿಂದ ನೀರವ ಮೌನ ಆವರಿಸಿದೆ..

Related posts