ಜೆಡಿಎಸ್ ಪಕ್ಷದ ಸಭೆ : ಗ್ರೇಟರ್ ಬೆಂಗಳೂರು ಅಥಾರಿಟಿ ವಾರ್ಡ್ ವಿಭಜನೆಗೆ ಆಕ್ಷೇಪಣೆ ಸಲ್ಲಿಕೆ ಮತ್ತು ಆಕಾಂಕ್ಷಿಗಳ ಪಟ್ಟಿ ಸಿದ್ಧತೆ.
ಜೆಡಿಎಸ್ ಪಕ್ಷದ ಸಭೆ : ಗ್ರೇಟರ್ ಬೆಂಗಳೂರು ಅಥಾರಿಟಿ ವಾರ್ಡ್ ವಿಭಜನೆಗೆ ಆಕ್ಷೇಪಣೆ ಸಲ್ಲಿಕೆ ಮತ್ತು ಆಕಾಂಕ್ಷಿಗಳ ಪಟ್ಟಿ ಸಿದ್ಧತೆ.
ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವಾರ್ಡ್‌ಗಳ ವಿಭಜನೆಯಲ್ಲಿನ ನ್ಯೂನತೆಗಳ ಕುರಿತು ಆಕ್ಷೇಪಣೆ ಸಲ್ಲಿಸುವ ವಿಷಯ ಹಾಗೂ ಮುಂಬರುವ ಜಿಬಿಎ ಚುನಾವಣೆಗೆ ಜೆಡಿಎಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿ ಸಿದ್ಧತೆ ಕುರಿತಂತೆ ಇಂದು ಜೆಪಿ ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯನ್ನು ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕರಾದ ಶ್ರೀ ಎಚ್. ಎಂ. ರಮೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ನಗರ ಮುಖಂಡರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಪ್ರಮುಖ ಮುಖಂಡರು ಭಾಗವಹಿಸಿದರು.
ಸಭೆಯಲ್ಲಿ 50 ಮಂದಿ ಆಕಾಂಕ್ಷಿಗಳ ಪ್ರಾಥಮಿಕ ಪಟ್ಟಿಯನ್ನು ಸಿದ್ಧಪಡಿಸಿ, ಅದನ್ನು ಪಕ್ಷದ ವರಿಷ್ಠ ನಾಯಕರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಲೋಕ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನಾಚರಣೆಯನ್ನೂ ಆಚರಿಸಲಾಯಿತು.
ಸಭೆಯಲ್ಲಿ ಶಾಸಕರಾದ ಟಿ.ಎನ್. ಜವರಾಯಿಗೌಡ, ಮಾಜಿ ಸಚಿವರಾದ ಶ್ರೀಮತಿ ಲೀಲಾ ದೇವಿ ಆರ್. ಪ್ರಸಾದ್, ಮಾಜಿ ಶಾಸಕರಾದ ಕೆ.ಎ. ತಿಪ್ಪೇಸ್ವಾಮಿ, ಪಕ್ಷದ ಜಿಲ್ಲಾ ಚುನಾವಣಾಧಿಕಾರಿಯಾದ ಶ್ರೀಮತಿ ಶೈಲಾ ಸಂತೋಜಿ ರಾವ್, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಬಿ. ಭದ್ರೇಗೌಡ, ವಿರೋಧ ಪಕ್ಷದ ಮಾಜಿ ನಾಯಕ ಟಿ. ತಿಮ್ಮೇಗೌಡ, ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಮುನಿಸ್ವಾಮಿ, ಶ್ರೀಮತಿ ರಜಿನಿ ಮೂರ್ತಿ, ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷರಾದ ಎ.ಎಂ. ಪ್ರವೀಣ್ ಕುಮಾರ್, ಚೆನ್ನೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ತಾರಾ ಲೋಕೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

