ಸುದ್ದಿ 

ಬೆಂಗಳೂರು ಆಡಳಿತಕ್ಕೆ ನೂತನ ವೇಗ

Taluknewsmedia.com

ಬೆಂಗಳೂರು ಆಡಳಿತಕ್ಕೆ ನೂತನ ವೇಗ

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಬೆಂಗಳೂರು ನಗರ ಪಾಲಿಕೆ ವಾರ್ಡ್ ವಿಂಗಡಣೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡೆನು.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿ 5 ನಗರಪಾಲಿಕೆ ರಚಿಸಿ, ವಾರ್ಡ್ ವಿಂಗಡಣೆ ಮಾಡಲಾಗಿದೆ. ಐದು ನಗರ ಪಾಲಿಕೆಗಳಿಗೆ ಒಟ್ಟು 368 ವಾರ್ಡ್‌ಗಳಾಗಿ ಮರುವಿಂಗಡಣೆ ಮಾಡಲಾಗಿದೆ.

ಆಡಳಿತ ಶಕ್ತಿಯನ್ನು ವೃದ್ಧಿಸಿ, ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಸ್ಥಳೀಯ ಅಭಿವೃದ್ಧಿ, ಮೂಲಸೌಕರ್ಯ ಮತ್ತು ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಸಹಾಯವಾಗಲಿದೆ. ಪಾಲಿಕೆಯ ಹೊಸ ವಾರ್ಡ್‌ಗಳ ಮೂಲಕ ಯುವ ನಾಯಕತ್ವ ಬೆಳೆಯಲಿದೆ.

Related posts