ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಹೊಸ ಹೆಜ್ಜೆ: ಗೇಲ್ ಸಂಸ್ಥೆಯಿಂದ CBG ಘಟಕ
ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಹೊಸ ಹೆಜ್ಜೆ: ಗೇಲ್ ಸಂಸ್ಥೆಯಿಂದ CBG ಘಟಕ
ಬೆಂಗಳೂರು: ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಪ್ರಕ್ರಿಯೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಕೆಸಿಡಿಸಿ ಪ್ರದೇಶದಲ್ಲಿ ಗೇಲ್ ಸಂಸ್ಥೆಯು ಕಂಪ್ರೆಸ್ಡ್ ಬಯೋ ಗ್ಯಾಸ್ (CBG) ಘಟಕವನ್ನು ಸ್ಥಾಪಿಸಲು ಮುಂದಾಗಿದೆ.
ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಹಾಗೂ ಗೇಲ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್. ಎನ್. ಯಾದವ್ ರವರು, ಮಾನ್ಯ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು ಒಪ್ಪಂದ ಪತ್ರಕ್ಕೆ ಸಹಿ ಹಾಕುವ ಮೂಲಕ ಒಡಂಬಡಿಕೆಗೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಬೆ.ಘ.ತ್ಯಾ.ನಿ. ನಿಯಮಿತದ ಸಿಇಒ ಕರೀಗೌಡ, ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಘಟಕದಿಂದ ನಗರದ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಪರಿಷ್ಕರಿಸಿ ಶಕ್ತಿಯ ರೂಪಕ್ಕೆ ಪರಿವರ್ತನೆ ಮಾಡುವ ಗುರಿ ಹೊಂದಲಾಗಿದೆ. ಇದರಿಂದ ಪರಿಸರ ಸಂರಕ್ಷಣೆಗೆ ಪೂರಕವಾಗುವ ಜೊತೆಗೆ ಸ್ವಚ್ಛ ಮತ್ತು ಹಸಿರು ಬೆಂಗಳೂರಿನತ್ತ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದೆ.

