ಸುದ್ದಿ 

ಹಾಸನಾಂಬ ದರ್ಶನದ ವೇಳೆ ಜಿಲ್ಲಾಡಳಿತದ ಶಿಷ್ಟಾಚಾರ ಉಲ್ಲಂಘನೆ ಆರೋಪ – ಶಾಸಕ ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Taluknewsmedia.com

ಹಾಸನಾಂಬ ದರ್ಶನದ ವೇಳೆ ಜಿಲ್ಲಾಡಳಿತದ ಶಿಷ್ಟಾಚಾರ ಉಲ್ಲಂಘನೆ ಆರೋಪ – ಶಾಸಕ ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ


ಹಾಸನಾಂಬ ದೇವಾಲಯದ ಮುಖ್ಯ ಪ್ರವೇಶದ್ವಾರದ ಎದುರು ಶನಿವಾರ ಜಿಲ್ಲಾಡಳಿತದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಮಾಜಿ ಸಚಿವ ಎ. ಮಂಜು, ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಭಾಗವಹಿಸಿದರು.

ಶುಕ್ರವಾರ ಕುಟುಂಬ ಸಮೇತ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜಿಲ್ಲಾಡಳಿತವು ಶಿಷ್ಟಾಚಾರ ಪಾಲಿಸದಿರುವುದು ಪ್ರತಿಭಟನೆಯ ಪ್ರಮುಖ ಕಾರಣವಾಗಿದೆ. ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಕುಮಾರಸ್ವಾಮಿ ಅವರ ಸ್ವಾಗತಕ್ಕೆ ಜಿಲ್ಲಾಧಿಕಾರಿ ಹಾಜರಾಗದೇ ಇದ್ದುದು, ಹಾಗೂ ದರ್ಶನದ ನಂತರ ಗೌರವಾರ್ಪಣೆ ಸಲ್ಲಿಸದಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಯಿತು.

ಜಿಲ್ಲಾಡಳಿತದ ಈ ವರ್ತನೆ “ಕೇಂದ್ರ ಸಚಿವರಿಗೂ, ಸ್ಥಳೀಯ ಜನಪ್ರತಿನಿಧಿಗಳಿಗೂ ಅವಮಾನ” ಎಂದು ಪ್ರತಿಭಟನಾಕಾರರು ಆರೋಪಿಸಿದರು. “ಇದು ಹಾಸನ ಜಿಲ್ಲೆಯ ಗೌರವಕ್ಕೆ ಧಕ್ಕೆ ತಂದಿದೆ” ಎಂದು ಶಾಸಕ ಸ್ವರೂಪ್ ಪ್ರಕಾಶ್ ಹೇಳಿದರು.

ಹಾಸನಾಂಬ ದೇವಾಲಯದ ಮುಖ್ಯ ದ್ವಾರದ ಬಳಿ ನಡೆದ ಈ ಪ್ರತಿಭಟನೆಯಲ್ಲಿ ಶಿಸ್ತುಪಾಲನೆಯ ಕೊರತೆಯನ್ನು ಖಂಡಿಸಿ ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳದಲ್ಲಿ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವರದಿಯಾಗಿದೆ.

Related posts