ಸುದ್ದಿ 

ಹೊಸಕೋಟೆ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಟಿಪ್ಪರ್‌ಗೆ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಒಬ್ಬನ ಸ್ಥಿತಿ ಗಂಭೀರ

Taluknewsmedia.com

ಹೊಸಕೋಟೆ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಟಿಪ್ಪರ್‌ಗೆ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಒಬ್ಬನ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಲ್ಲಿಮಾಕನಪುರ ಗ್ರಾಮದ ಬಳಿ ನಡೆದ ದುರ್ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತರನ್ನು ಉತ್ತರ ಭಾರತ ಮೂಲದ ಲೊಕೇಶ್ (25) ಮತ್ತು ವಿಮಲ್ (27) ಎಂದು ಗುರುತಿಸಲಾಗಿದೆ.

ಪೊಲೀಸ್ ವರದಿಯ ಪ್ರಕಾರ, ಹೊಸಕೋಟೆ–ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಸವಾರರು ಓವರ್‌ಟೇಕ್ ಮಾಡಲು ಮುಂದಾದ ವೇಳೆ ಎದುರಿನಿಂದ ಬಂದ ಟಿಪ್ಪರ್ ಲಾರಿಯೊಂದಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಅಪಘಾತದಿಂದ ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

Related posts