ಫುಡ್ ಡೆಲಿವರಿ ಬಾಯ್‌ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ನೇಪಾಳಿ ಗ್ಯಾಂಗ್‌ವೊಂದು ನಗರದ ಬೆಳ್ಳಂದೂರು ಪೊಲೀಸ್‌ಗಳ ಬಲೆಗೆ ಸಿಕ್ಕಿದೆ.
ಫುಡ್ ಡೆಲಿವರಿ ಬಾಯ್‌ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ನೇಪಾಳಿ ಗ್ಯಾಂಗ್‌ವೊಂದು ನಗರದ ಬೆಳ್ಳಂದೂರು ಪೊಲೀಸ್‌ಗಳ ಬಲೆಗೆ ಸಿಕ್ಕಿದೆ.
ಮೂವರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿದ್ದ ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20) ಹಾಗೂ ಸಮೀರ್ ಲೋಹಾರ್ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನೇಪಾಳ ಮೂಲದವರಾಗಿದ್ದು, ನಗರದ ವಿವಿಧ ಅಪಾರ್ಟ್‌ಮೆಂಟ್‌ಗಳಲ್ಲಿ ಸೆಕ್ಯುರಿಟಿ ಹಾಗೂ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದರು. ಆದರೆ ಕೆಲಸದ ಹೊರತಾಗಿ ಫುಡ್ ಡೆಲಿವರಿ ಬಾಯ್‌ಗಳನ್ನೇ ಅಡ್ಡಗಟ್ಟಿ ಮೊಬೈಲ್, ಹಣವನ್ನು ಕಸಿದು ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಕಳೆದ ಸೆಪ್ಟೆಂಬರ್ 13ರ ರಾತ್ರಿ ಕಸವನಹಳ್ಳಿ ರಸ್ತೆಯಲ್ಲಿ ಡೆಲಿವರಿ ಬಾಯ್ ಸುರೇಶ್ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಪ್ರಕರಣದ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು.
ಬೆಳ್ಳಂದೂರು ಪೊಲೀಸರು ಬಲಿಷ್ಠ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಒಟ್ಟು 9 ಮೊಬೈಲ್ ಫೋನ್‌ಗಳು ಹಾಗೂ ಮೂರು ದ್ವಿಚಕ್ರ ವಾಹನಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಬೆಳ್ಳಂದೂರು ಮಾತ್ರವಲ್ಲದೆ ಹೆಬ್ಬಗೋಡಿ, ಪರಪ್ಪನ ಅಗ್ರಹಾರ, ಬಂಡೆಪಾಳ್ಯ ಹಾಗೂ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಇದೇ ರೀತಿಯ ದರೋಡೆ ಕೃತ್ಯಗಳಲ್ಲಿ ತೊಡಗಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

