ಸುದ್ದಿ 

ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಮೂವರು ಆರೋಪಿಗಳ ಬಂಧನ: ಎಸ್ಪಿ ಸಿ.ಕೆ. ಬಾಬಾ ಮಾಹಿತಿ

Taluknewsmedia.com

ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಮೂವರು ಆರೋಪಿಗಳ ಬಂಧನ: ಎಸ್ಪಿ ಸಿ.ಕೆ. ಬಾಬಾ ಮಾಹಿತಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರು ತ್ವರಿತ ಕ್ರಮ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಕಾರ್ತಿಕ್, ಗ್ಲೆನ್, ಹಾಗೂ ಸುಯೋಗಾ ಎಂದು ಗುರುತಿಸಲಾಗಿದ್ದು, ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಮಾದನಾಯಕನಹಳ್ಳಿ ಸಮೀಪದ ಗಂಗೊಂಡನಹಳ್ಳಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ವಾಸಿಸುತ್ತಿದ್ದರು. ಈ ಸಂದರ್ಭದಲ್ಲಿ ಐವರು ಆರೋಪಿಗಳು ಅಲ್ಲಿ ಹಾಜರಿದ್ದು, ಅವರಲ್ಲಿ ಮೂವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಪ್ರಾರಂಭಿಸಿದರು. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ದರೋಡೆ (ಡಕಾಯಿತಿ) ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ಪತ್ತೆಹಚ್ಚಲು ಮೂರು ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ತೀವ್ರ ಶೋಧ ಕಾರ್ಯಾಚರಣೆ ಬಳಿಕ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಳಿದ ಇಬ್ಬರ ಪತ್ತೆಗಾಗಿ ಶೋಧ ಮುಂದುವರಿದಿದೆ ಎಂದು ಎಸ್ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.

Related posts