ಸುದ್ದಿ 

ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆಯೋ, ಅಪಘಾತವೋ ಎಂಬ ಅನುಮಾನ

Taluknewsmedia.com

ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆಯೋ, ಅಪಘಾತವೋ ಎಂಬ ಅನುಮಾನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಯುವ ಶಿಕ್ಷಕಿಯೊಬ್ಬರ ಶವ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಬೂಡುಮುಗೇರು ನಿವಾಸಿ ತೇಜಸ್ವಿನಿ (23) ಮೃತಪಟ್ಟ ಶಿಕ್ಷಕಿ. ತೇಜಸ್ವಿನಿ ಸ್ಥಳೀಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆಂದು ಕುಟುಂಬದವರು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಮನೆಯವರು ಕಾಣದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ಮನೆಯ ಪಕ್ಕದಲ್ಲಿರುವ ಬಾವಿಯಲ್ಲಿ ಶವ ತೇಲುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಲು ಜಾರಿ ಬಾವಿಗೆ ಬಿದ್ದರೋ ಅಥವಾ ಆತ್ಮಹತ್ಯೆ ಮಾಡಿಕೊಂಡರೋ ಎಂಬ ಅನುಮಾನ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಯುತ್ತಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

Related posts