ಸುದ್ದಿ 

ಬೆಂಗಳೂರು ನಡಿಗೆ: ನಾಗರಿಕರೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದ

Taluknewsmedia.com

ಬೆಂಗಳೂರು ನಡಿಗೆ: ನಾಗರಿಕರೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದ

ಬೆಂಗಳೂರು: ಪಶ್ಚಿಮ ನಗರ ಪಾಲಿಕೆಯ ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರದ ಗಾಂಧಿ ಉದ್ಯಾನವನದಲ್ಲಿ ಶನಿವಾರ ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ ನಾಗರಿಕರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಭರತ್ ನಗರದ ನಿವಾಸಿಗಳು ತಮ್ಮ ಸಮಸ್ಯೆಗಳು, ಮೂಲಸೌಕರ್ಯ ಸಮಸ್ಯೆಗಳು, ರಸ್ತೆ, ಒಳಚರಂಡಿ, ನೀರು ಹಾಗೂ ಕಸ ನಿರ್ವಹಣೆಯ ಕುರಿತ ಅಹವಾಲುಗಳನ್ನು ಸಚಿವರಿಗೆ ಮಂಡಿಸಿದರು. ನಾಗರಿಕರ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿದ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಉಪ ಮುಖ್ಯಮಂತ್ರಿ ಕಾರ್ಯದರ್ಶಿ, ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಪಶ್ಚಿಮ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ, ಅಪರ ಆಯುಕ್ತ ದಿಗ್ವಿಜಯ್ ಬೋಡ್ಕೆ ಹಾಗೂ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಡಿ.ಕೆ. ಶಿವಕುಮಾರ್ ಅವರು ಮಾತನಾಡುತ್ತಾ, “ನಗರದ ಪ್ರತಿಯೊಂದು ಪ್ರದೇಶದ ಸಮಸ್ಯೆ ಪರಿಹಾರ ನಮ್ಮ ಆದ್ಯತೆ. ನಾಗರಿಕರ ನೇರ ಸಂವಾದದಿಂದ ಉತ್ತಮ ಆಡಳಿತ ಸಾಧ್ಯ,” ಎಂದು ಹೇಳಿದರು.

“ಬೆಂಗಳೂರು ನಡಿಗೆ” ಅಭಿಯಾನದಡಿ ಮುಂದಿನ ದಿನಗಳಲ್ಲಿ ನಗರದಲ್ಲಿನ ಇತರೆ ವಲಯಗಳಲ್ಲಿಯೂ ಇದೇ ರೀತಿಯ ಸಂವಾದ ಕಾರ್ಯಕ್ರಮಗಳನ್ನು ನಡೆಸುವ ಯೋಜನೆ ಇದೆ ಎಂದು ಅವರು ತಿಳಿಸಿದರು.

Related posts