ಸುದ್ದಿ 

ಕೆ.ಆರ್.ಪುರಂ ತ್ರಿವೇಣಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮಹಿಳೆ ಸಾವು, ಮೂವರು ಗಂಭೀರ

Taluknewsmedia.com

ಕೆ.ಆರ್.ಪುರಂ ತ್ರಿವೇಣಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮಹಿಳೆ ಸಾವು, ಮೂವರು ಗಂಭೀರ

ರಾಜಧಾನಿ ಬೆಂಗಳೂರಿನ ಕೆ.ಆರ್.ಪುರಂ ತ್ರಿವೇಣಿ ನಗರದಲ್ಲಿ ಭಾರೀ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮದಿಂದ ಮನೆ ಸಂಪೂರ್ಣ ಕುಸಿದು ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಅವಶೇಷಗಳಲ್ಲಿ ಸಿಲುಕಿ ಪರದಾಡಿದ್ದಾರೆ.

ಬೆಳಗಿನ ವೇಳೆಯಲ್ಲಿ ಈ ದಾರುಣ ಘಟನೆ ನಡೆದಿದ್ದು, ಸಿಲಿಂಡರ್ ಸೋರಿಕೆಯಾಗಿ ಸ್ಫೋಟ ಸಂಭವಿಸಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಸ್ಫೋಟದ ಶಬ್ದದಿಂದ ಸುತ್ತಮುತ್ತಲಿನ ಪ್ರದೇಶದ ಜನ ಬೆಚ್ಚಿಬಿದ್ದಿದ್ದಾರೆ.

ಘಟನೆಯ ಮಾಹಿತಿ ದೊರೆತ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳೀಯರು ಸಹ ಸಹಾಯ ಹಸ್ತ ಚಾಚಿದ್ದು, ಕಟ್ಟಡದ ಅವಶೇಷಗಳಲ್ಲಿ ಸಿಲುಕಿದವರನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ.

ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಹಲವರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ದುರ್ಘಟನೆ ನಗರದ ನಿವಾಸಿಗಳಲ್ಲಿ ಭೀತಿಯ ವಾತಾವರಣ ಉಂಟುಮಾಡಿದೆ. ಅಧಿಕಾರಿಗಳು ಶೀಘ್ರದಲ್ಲೇ ಪೀಡಿತ ಕುಟುಂಬಗಳಿಗೆ ನೆರವು ಒದಗಿಸುವ ನಿರೀಕ್ಷೆಯಿದೆ.

Related posts