ಸುದ್ದಿ 

ಹಾಸನ: ಜಿಲ್ಲೆಯಾದ್ಯಂತ ಕಳೆದ ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ದುರ್ಘಟನೆಗಳು ಸಂಭವಿಸುತ್ತಿವೆ.

Taluknewsmedia.com

ಹಾಸನ: ಜಿಲ್ಲೆಯಾದ್ಯಂತ ಕಳೆದ ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ದುರ್ಘಟನೆಗಳು ಸಂಭವಿಸುತ್ತಿವೆ. ಈ ನಡುವೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ದುರಂತ ಮನಸ್ಸು ಕಲುಕಿದೆ.

ಗ್ರಾಮದ ನಿವಾಸಿ ಜವರಮ್ಮ (63) ಎಂಬ ಮಹಿಳೆ ಮಳೆಯ ಪರಿಣಾಮದಿಂದ ಮನೆಗೋಡೆ ಕುಸಿದು ಮೃತಪಟ್ಟಿದ್ದಾರೆ. ಬೆಳಿಗ್ಗೆ ಸುಮಾರು 5:30ರ ಸಮಯದಲ್ಲಿ ಅವರು ಮನೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ. ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ವೇಳೆ ಮನೆಯಲ್ಲಿದ್ದ ಜವರಮ್ಮರ ಪುತ್ರ ಪ್ರಾಣಾಪಾಯದಿಂದ ಪಾರಾಗಿರುವುದು ಶೋಕದ ನಡುವಿನ ಸಾಂತ್ವನದ ಸಂಗತಿ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳೀಯ ಶಾಸಕ ಎ. ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಮನೆಗಳು ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ವಿನಂತಿ ಮಾಡಿದ್ದಾರೆ.

Related posts