“ಸಿಎಂ ಆಯ್ಕೆ ಪಕ್ಷದ ನಿರ್ಧಾರ – ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ”: ಸಚಿವ ಸತೀಶ್ ಜಾರಕಿಹೊಳಿ
“ಸಿಎಂ ಆಯ್ಕೆ ಪಕ್ಷದ ನಿರ್ಧಾರ – ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ”: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಕುರಿತಂತೆ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು, “ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ನಿರ್ಧಾರ ಪಕ್ಷದ ಮಟ್ಟದಲ್ಲೇ ಆಗಬೇಕು. ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿ ನಡೆದ ಕಾಕತಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
“2028ರ ಚುನಾವಣೆಗೆ ನಮ್ಮ ಪಕ್ಷವು ಸಿಎಂ ಅಭ್ಯರ್ಥಿಯನ್ನು ಘೋಷಿಸುವ ವಿಷಯವನ್ನು ಈಗಾಗಲೇ ಸ್ಪಷ್ಟಪಡಿಸಿದೆ. ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯವನ್ನು ಮಾತ್ರ ಹಂಚಿಕೊಂಡಿದ್ದಾರೆ. ಅಂತಿಮವಾಗಿ ನಾಯಕತ್ವವನ್ನು ಯಾರು ವಹಿಸಿಕೊಳ್ಳಬೇಕು ಎಂಬುದನ್ನು ಪಕ್ಷ ಮತ್ತು ಶಾಸಕರು ತೀರ್ಮಾನಿಸುತ್ತಾರೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಯುತ್ತಿದೆ,” ಎಂದು ಸತೀಶ್ ಜಾರಕಿಹೊಳಿ ಹೇಳಿದರು.

