ಸುದ್ದಿ 

ಬೆಂಗಳೂರು: ರಾಜಕುಮಾರ್ ರಸ್ತೆಯ ವೈಟ್‌ ಟಾಪಿಂಗ್‌ ಕಾಮಗಾರಿಗೆ ಮುಖ್ಯ ಆಯುಕ್ತರ ತಪಾಸಣೆ

Taluknewsmedia.com

ಬೆಂಗಳೂರು: ರಾಜಕುಮಾರ್ ರಸ್ತೆಯ ವೈಟ್‌ ಟಾಪಿಂಗ್‌ ಕಾಮಗಾರಿಗೆ ಮುಖ್ಯ ಆಯುಕ್ತರ ತಪಾಸಣೆ

ಬೆಂಗಳೂರು ಪಶ್ಚಿಮ ವಿಭಾಗದ ರಾಜಕುಮಾರ್ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳನ್ನು ನಗರ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಇಂದು ಬೆಳಿಗ್ಗೆ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಶ್ಚಿಮ ವಿಭಾಗದ ಆಯುಕ್ತ ಡಾ. ರಾಜೇಂದ್ರ ಕೆ.ವಿ, ಜಂಟಿ ಆಯುಕ್ತ ಆರತಿ ಆನಂದ್, ಮುಖ್ಯ ಅಭಿಯಂತರ ಸ್ವಯಂಪ್ರಭಾ ಹಾಗೂ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯ ಆಯುಕ್ತರು ಕಾಮಗಾರಿ ಗುಣಮಟ್ಟ ಹಾಗೂ ವೇಗದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಅವರು ಸ್ಥಳೀಯ ನಿವಾಸಿಗಳ ಪ್ರತಿಕ್ರಿಯೆ ಕೂಡ ಆಲಿಸಿ, ಸಂಚಾರಕ್ಕೆ ಅಡ್ಡಿಯಾಗದಂತೆ ಸೂಕ್ತ ಯೋಜನೆ ರೂಪಿಸುವಂತೆ ಸೂಚಿಸಿದರು.

Related posts