ಚಿಕ್ಕಬಳ್ಳಾಪುರದಲ್ಲಿ ದಾರುಣ ಅಪಘಾತ: ಕೆಎಸ್ಆರ್ಟಿಸಿ ಬಸ್ ಬೈಕ್‌ಗೆ ಡಿಕ್ಕಿ – ಒಬ್ಬ ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಚಿಕ್ಕಬಳ್ಳಾಪುರದಲ್ಲಿ ದಾರುಣ ಅಪಘಾತ: ಕೆಎಸ್ಆರ್ಟಿಸಿ ಬಸ್ ಬೈಕ್‌ಗೆ ಡಿಕ್ಕಿ – ಒಬ್ಬ ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ತಳಗವಾರ ಕ್ರಾಸ್ ಬಳಿ ನಡೆದ ದಾರುಣ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಮೃತನನ್ನು ತಾಲ್ಲೂಕಿನ ಶಿವಮಣಿ (26) ಎಂದು ಗುರುತಿಸಲಾಗಿದೆ. ಸಾಯಿ ಎಂಬ ಯುವಕ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದ್ದು, ಘಟನೆಯಿಂದ ಪ್ರದೇಶದಲ್ಲಿ ದುಃಖದ ಛಾಯೆ ಆವರಿಸಿದೆ.
ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದ ಈ ಘಟನೆ ರಸ್ತೆ ಸುರಕ್ಷತೆಯ ಅಗತ್ಯತೆಯನ್ನು ಮತ್ತೆ ನೆನಪಿಸಿದೆ.

