ಸುದ್ದಿ 

ವಾಕಿಂಗ್ ವೇಳೆ ಹೃದಯಾಘಾತ ಶಂಕೆ: ವ್ಯಕ್ತಿ ಸ್ಥಳದಲ್ಲೇ ಸಾವು

Taluknewsmedia.com

ವಾಕಿಂಗ್ ವೇಳೆ ಹೃದಯಾಘಾತ ಶಂಕೆ: ವ್ಯಕ್ತಿ ಸ್ಥಳದಲ್ಲೇ ಸಾವು

ಮೈಸೂರಿನ ಹೆಬ್ಬಾಳ್ ಬಡಾವಣೆಯ ಬಸವನಗುಡಿ ಸರ್ಕಲ್ ಬಳಿ ಬೆಳಗಿನ ವಾಕಿಂಗ್ ವೇಳೆ ನಡೆದ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಸುಮಾರು 60 ವರ್ಷದ ವ್ಯಕ್ತಿ ಫುಟ್‌ಪಾತ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಸ್ಥಳಕ್ಕೆ ಹೆಬ್ಬಾಳ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ, ಮೃತನ ಗುರುತಿನ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಹೃದಯಾಘಾತವೇ ಸಾವಿಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

ಮೃತ ವ್ಯಕ್ತಿಯು ಅಪರಿಚಿತರಾಗಿದ್ದು, ಅವರ ಕುರಿತು ಯಾವುದೇ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರಿಂದ ಸಹಕಾರ ಕೋರಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಶ್ರೀನಿವಾಸ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು ಹೆಬ್ಬಾಳ್ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Related posts