ಮಂಟೂರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆ ಉದ್ಘಾಟನೆ – ಗ್ರಾಮೀಣ ಶಿಕ್ಷಣದ ಹೊಸ ಅಧ್ಯಾಯಕ್ಕೆ ಚಾಲನೆ
ಮಂಟೂರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆ ಉದ್ಘಾಟನೆ – ಗ್ರಾಮೀಣ ಶಿಕ್ಷಣದ ಹೊಸ ಅಧ್ಯಾಯಕ್ಕೆ ಚಾಲನೆ
ರಾಯಬಾಗ ತಾಲೂಕಿನ ಮಂಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 9ನೇ ಮತ್ತು 10ನೇ ತರಗತಿಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಯಾಗಿ ಪರಿವರ್ತಿಸಿದ ಹೊಸ ಶಾಖೆಯನ್ನು ಇಂದು ಭವ್ಯವಾಗಿ ಉದ್ಘಾಟಿಸಲಾಯಿತು.
ಗ್ರಾಮದ ವಿದ್ಯಾರ್ಥಿಗಳ ಶಿಕ್ಷಣಾಭಿವೃದ್ಧಿಗೆ ಹೊಸ ಆಶಾಕಿರಣವಾಗಿ ಪರಿಣಮಿಸಿರುವ ಈ ಸ್ಮರಣೀಯ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಮ.ನಿ.ಪ್ರಸ್ವ. ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು (ರಕ್ತಮಠ, ಬೆಂಡವಾಡ) ದಿವ್ಯ ಸಾನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಪ್ರಿಯಾಂಕ ಜಾಕಿರೋಳಿ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಎಸ್.ಡಿ.ಎಂ.ಸಿ ಅಧ್ಯಕ್ಷರು ಶ್ರೀ ರಾಮಚಂದ್ರ ಉಪ್ಪಾರ, ಮಂಟೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ರಾವಸಾಬ ಮೇಗಾಡ್ಡೆ, ಉಪನಿರ್ದೇಶಕರು (ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕೋಡಿ) ಶ್ರೀ ಸೀತಾರಾಮ್ ಆರ್.ಎಸ್., ರಾಯಬಾಗ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಬಸವರಾಜಪ್ಪ ಆರ್., ಸಹಾಯಕ ನಿರ್ದೇಶಕರು (ಅಕ್ಷರ ದಾಸೋಹ ಯೋಜನೆ) ಶ್ರೀ ಆರ್.ಎಂ. ಪಾಟೀಲ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀ ಬಸವರಾಜ ಕಾಂಬಳೆ, ಮೂಲ ಸಂಪನ್ಮೂಲ ವ್ಯಕ್ತಿ ಶ್ರೀ ಸದಾಶಿವ ಕೊಳವಿ, ಹಾಗೂ ಎಸ್‌ಡಿಎಂಸಿ ಸದಸ್ಯರು, ಸ್ಥಳೀಯ ನಾಯಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು, “ಮಂಟೂರ ಗ್ರಾಮದಲ್ಲಿ ಪ್ರೌಢ ಶಾಲೆ ಆರಂಭವಾಗುವುದರಿಂದ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶ ದೊರೆಯಲಿದೆ. ನಮ್ಮ ಮಕ್ಕಳು ಭವಿಷ್ಯದ ಭಾರತದ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿ” ಎಂದು ಹಾರೈಸಿದರು.
ಈ ಕಾರ್ಯಕ್ರಮವು ಗ್ರಾಮೀಣ ಶಿಕ್ಷಣದ ಅಭಿವೃದ್ಧಿಗೆ ಹೊಸ ಬಾಗಿಲು ತೆರೆಯುವಂತಾಗಿದೆ ಎಂದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದರು.

