ಸುದ್ದಿ 

ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Taluknewsmedia.com

ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ ನಗರದಲ್ಲಿ ಮತ್ತೊಂದು ದುಃಖಕರ ಘಟನೆ ಬೆಳಕಿಗೆ ಬಂದಿದೆ. ನಗರದ ಕೋಟೆ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ ಓದುತ್ತಿದ್ದ 21 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವಿದ್ಯಾರ್ಥಿನಿ ಭದ್ರಾವತಿ ತಾಲೂಕು ದೊಡ್ಡೇರಿ ಗಂಗೂರು ಗ್ರಾಮದ ಮನೀಷಾ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎಸ್.ಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಸುಮಾರು 10:15ರ ವೇಳೆಯಲ್ಲಿ ಹಾಸ್ಟೆಲ್‌ನ ಟೆರೇಸ್‌ಗೆ ತೆರಳಿದ್ದ ಮನೀಷಾ, ಅಲ್ಲಿರುವ ಆ್ಯಂಗ್ಲರ್‌ಗೆ ಬೇಣ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ವಿಶೇಷವಾಗಿ ಆತ್ಮಹತ್ಯೆಯ ಮೊದಲು ಮನೀಷಾ ಬೆಳಗ್ಗೆಯ ತಿಂಡಿ ಸೇವಿಸಿದ್ದಾಳೆ ಎನ್ನುವುದು ಪ್ರಾಥಮಿಕ ಮಾಹಿತಿ. ಘಟನೆಯ ಸುದ್ದಿಯ ತಿಳಿಯುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರೆಸಿದ್ದಾರೆ. ವಿದ್ಯಾರ್ಥಿನಿಯ ಶವವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ವಿದ್ಯಾರ್ಥಿನಿಯ ಆಕಸ್ಮಿಕ ಆತ್ಮಹತ್ಯೆ ಕುಟುಂಬ, ಸ್ನೇಹಿತರಲ್ಲಿ ಹಾಗೂ ಕಾಲೇಜಿನಲ್ಲಿ ದುಃಖದ ನೆರಳು ಹರಿಸಿದೆ.

Related posts