ಸುದ್ದಿ 

ಬೀದರ್: ಭಾಲ್ಕಿ ಬಳಿ ಭೀಕರ ರಸ್ತೆ ಅಪಘಾತ — ಮೂವರಿಗೆ ಸ್ಥಳದಲ್ಲೇ ಸಾವು

Taluknewsmedia.com

ಬೀದರ್: ಭಾಲ್ಕಿ ಬಳಿ ಭೀಕರ ರಸ್ತೆ ಅಪಘಾತ — ಮೂವರಿಗೆ ಸ್ಥಳದಲ್ಲೇ ಸಾವು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು (ಬುಧವಾರ) ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವ್ಯಕ್ತಿಗಳು ದುರ್ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ಈ ದುರಂತ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಐವರು ಪ್ರಯಾಣಿಸುತ್ತಿದ್ದ ಕಾರು ಹುಮ್ನಾಬಾದ್ ಮಾರ್ಗವಾಗಿ ಬೀದರ್–ಕಲಬುರಗಿ ಹೆದ್ದಾರಿಯತ್ತ ತಿರುಗುತ್ತಿದ್ದಾಗ ಕೊರಿಯರ್ ಸೇವೆಗೆ ಬಳಸುತ್ತಿದ್ದ ಲೋಡ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ನವೀನ್‌ (25), ರಾಚಪ್ಪ (45) ಮತ್ತು ನಾಗರಾಜ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಇಬ್ಬರು — ಕಾಶಿನಾಥ ಮತ್ತು ಪ್ರತಾಪ — ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ತಾಲ್ಲೂಕಿನ ಜಗನಾಥಪುರ ಗ್ರಾಮದವರು ಎಂದು ಗುರುತಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿಯಂತೆ, ಮೃತರು ಕಲಬುರಗಿ ಜಿಲ್ಲೆಯ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಬೆಳಿಗ್ಗೆ ಸುಮಾರು 7.30ಕ್ಕೆ ನೀಲಮಂಡಿ ತಾಂಡಾ ಬಳಿ ಈ ಅಪಘಾತ ಸಂಭವಿಸಿದೆ.

Related posts