ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ದುರಂತ – ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರ್ ಡಿಕ್ಕಿ, ನಾಲ್ವರ ಸಾವು
ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ದುರಂತ – ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರ್ ಡಿಕ್ಕಿ, ನಾಲ್ವರ ಸಾವು
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಮೀಪ ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ಸಿದ್ದಾಪುರ ಗ್ರಾಮದ ನಿವಾಸಿಗಳಾದ ವಿಶ್ವನಾಥ್ (17), ಪ್ರವೀಣ್ (22), ಗಣೇಶ್ (20) ಮತ್ತು ಪ್ರಜ್ವಲ್ (17) ಎಂದು ಗುರುತಿಸಲಾಗಿದೆ.
ಕಾರು ಭೀಕರವಾಗಿ ಜಜ್ಜಿ ಹೋದ ಪರಿಣಾಮ ಮೃತಪಟ್ಟವರು ವಾಹನದೊಳಗೆ ಸಿಲುಕಿಕೊಂಡಿದ್ದು, ಜೆಸಿಬಿ ಸಹಾಯದಿಂದ ಮೃತದೇಹಗಳನ್ನು ಪೊಲೀಸರು ಹೊರತೆಗೆದರು. ಅಪಘಾತ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಪ್ರಾರಂಭಿಸಿದ್ದಾರೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಪ್ರಯತ್ನ ಪೊಲೀಸರು ಕೈಗೊಂಡಿದ್ದಾರೆ.

