ಸುದ್ದಿ 

ದೊಡ್ಡಬಳ್ಳಾಪುರದಲ್ಲಿ ಯುವಕನ ಹತ್ಯೆ: ಪೊಲೀಸರ ಚುರುಕು ತನಿಖೆ ಆರಂಭ

Taluknewsmedia.com

ದೊಡ್ಡಬಳ್ಳಾಪುರದಲ್ಲಿ ಯುವಕನ ಹತ್ಯೆ: ಪೊಲೀಸರ ಚುರುಕು ತನಿಖೆ ಆರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಬೆಳಕು ಕಂಡಿದ್ದು, ದೊಡ್ಡಬಳ್ಳಾಪುರದ ಡಿಕ್ರಾಸ್ ಪ್ರದೇಶದಲ್ಲಿ 28 ವರ್ಷದ ಯುವಕನನ್ನು ನಿರ್ದಯವಾಗಿ ಹತ್ಯೆ ಮಾಡಿರುವ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮೃತನನ್ನು ಪವನ್ ಎಂದು ಗುರುತಿಸಲಾಗಿದ್ದು, ಖಾಸಗಿ ಕಂಪನಿಯಲ್ಲಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾನೆ. ಗುರುತು ಸಿಗದ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲವು ಬಾರಿ ಕೊಚ್ಚಿ ಕ್ರೂರಿಯಾಗಿ ಹತ್ಯೆ ಮಾಡಿದ್ದಾರೆ. ಪವನ್‌ನ ಕೈ, ಕಾಲು ಹಾಗೂ ಮುಖದ ಭಾಗದಲ್ಲಿ ಭೀಕರ ಗಾಯಗಳ ಗುರುತುಗಳು ಕಂಡುಬಂದಿವೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಡಿವೈಎಸ್ಪಿ ಪಾಂಡುರಂಗ ತಂಡದೊಂದಿಗೆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚುವ ಸಲುವಾಗಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಹತ್ಯೆಯ ಹಿಂದೆ ಇರುವ ಕಾರಣ ಪತ್ತೆಹಚ್ಚಲು ಪೊಲೀಸರು ವೇಗವಾಗಿ ತನಿಖೆ ಮುಂದುವರೆಸಿದ್ದಾರೆ.

ಈ ಪ್ರಕರಣ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಶಾಂತ ಪ್ರದೇಶವೆಂದೇ ಗುರುತಿಸಿಕೊಂಡಿದ್ದ ಈ ಭಾಗದಲ್ಲಿ ನಡೆದ ಈ ಅವಘಡ ಸ್ಥಳೀಯರಲ್ಲಿ ಭೀತಿಯ ವಾತಾವರಣ ನಿರ್ಮಿಸಿದೆ.

ಪವನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳ ಸುಳಿವು ಹಿಡಿಯಲು ಪೊಲೀಸರು ಹಲವು ತಂತ್ರಗಳನ್ನು ಅನುಸರಿಸುತ್ತಿದ್ದು, ಶೀಘ್ರದಲ್ಲೇ ನಿಜಾಂಶ ಬಹಿರಂಗವಾಗುವ ನಿರೀಕ್ಷೆಯಿದೆ.

Related posts