ಕ್ರೈಂ ಸುದ್ದಿ 

ಕೋರ್ಟ್ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ..

Taluknewsmedia.com

ವಿಜಯನಗರ: ಜಿಲ್ಲೆಯ ಹೊಸಪೇಟೆ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಮುಖಂಡ ಹಾಗೂ ವಕೀಲರಾಗಿದ್ದ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಇವರನ್ನು ಹೊಸಪೇಟೆ ಕೋರ್ಟ್ ಆವರಣದಲ್ಲಿ ಮಚ್ಚಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆದರೆ ಇದುವರೆಗೆ ಕೊಲೆಗೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ.
ಈ ಹತ್ಯೆಯ ಬೆನ್ನಲ್ಲೇ ಆರೋಪಿಯಾದ ಮನೋಜ್ ಎಂಬಾತನನ್ನು ಪೊಲೀಸರು ಸ್ಥಳದಲ್ಲಿಯೇ ವಶಕ್ಕೆ ಪಡೆದಿದ್ದಾರೆ.
ಈ ಕೊಲೆ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಹೊಸಪೇಟೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Related posts

Leave a Comment