ಸುದ್ದಿ 

ಹಜ್ ಯಾತ್ರೆಯ ಆನ್ ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .


ಬೆಂಗಳೂರು: ನಗರದ ಹಜ್ ಭವನದಲ್ಲಿ, ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಆನ್ ಲೈನ್ ಅರ್ಜಿಗಳ ಪ್ರಕ್ರಿಯೆಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ರಾಜ್ಯ ಹಜ್ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದರು.       

ಈ ಬಾರಿ ಹಜ್ ಯಾತ್ರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್ ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಜನವರಿ 31, 2022 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಸ್ಲಿಂ ಸಮುದಾಯದವರು ಶ್ರದ್ಧೆ ಮತ್ತು ಭಕ್ತಿಯಿಂದ ಕೈಗೊಳ್ಳುವ ಈ ಯಾತ್ರೆಯಲ್ಲಿ ಅವರಿಗೆ ಯಾವುದೇ ತೊಂದರೆ ಆಗದಂತೆ ಸೌಲಭ್ಯ  ಕಲ್ಪಿಸಬೇಕು. ವಿಮಾನದ ವ್ಯವಸ್ಥೆ, ಅಲ್ಲಿ ತಂಗುವ ಹಾಗೂ ಇನ್ನಿತರ ವ್ಯವಸ್ಥೆಗಳಲ್ಲಿ ಲೋಪವಿರದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರು ಹಜ್ ಭವನದ ದುರಸ್ತಿಗೆ ಹೆಚ್ಚಿನ ಅನುದಾನ ದೊರಕಿಸಿಕೊಡಲು ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ಶ್ರೀ ರೌಫುದ್ದೀನ್ ಕಛೇರಿವಾಲೈ, ರಾಜ್ಯಸಭಾ ಸದಸ್ಯರು ಹಾಗೂ ಹಜ್ ಸಮಿತಿ ಸದಸ್ಯರಾದ ಶ್ರೀ ಸೈಯ್ಯದ್ ನಾಸಿರ್ ಹುಸೇನ್, ಶಾಸಕರು ಹಾಗೂ ಸಮಿತಿ ಸದಸ್ಯರಾದ ಶ್ರೀಮತಿ ಖಾನಿಜ್ ಫಾತಿಮಾ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.

Related posts

Leave a Comment