ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಕಲಿಯಲಿ : ಪ್ರೊ. ನಿರ್ಮಲ್ ರಾಜ್
Taluknewsmedia.comತುಮಕೂರು: ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ವಿಚಾರಗಳನ್ನು ಕಲಿತು ಅರಿತುಕೊಳ್ಳಬೇಕು ಎಂದು ತುಮಕೂರು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲ್ ರಾಜು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗ ಹಾಗೂ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ವತಿಯಿಂದ ನವೆಂಬರ್ 30 ರಂದು ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಪ್ರಕಾರ ಪದವಿ ತರಗತಿಗಳಿಗೆ ಸಿದ್ಧಪಡಿಸಲಾದ ಕನ್ನಡ ಪಠ್ಯಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಹದಿನೆಂಟು ಪಠ್ಯಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಓದಿದ ವಿದ್ಯಾರ್ಥಿಗಳು ಬೆಂಗಳೂರಂತಹ ಮಹಾನಗರಗಳಲ್ಲಿ ಕೆಲಸಗಿಟ್ಟಿಸಿಕೊಳ್ಳುವ ಸಂಖ್ಯೆ ಕಡಿಮೆಯಾಗಿದೆ. ಆದ್ದರಿಂದ ಕನ್ನಡದಲ್ಲಿ ಅಭ್ಯಾಸ ಮಾಡುವವರ ಸಂಖ್ಯೆಯು ಕಡಿಮೆಯಾಗುತ್ತಿದೆ. ಸಾಂಪ್ರದಾಯಿಕವಾಗಿ ಮತ್ತು ಚಾರಿತ್ರಿಕವಾಗಿ ಭಾರತದ ಇತಿಹಾಸವನ್ನು ಅವಲೋಕನ ಮಾಡಿದಾಗ ರಾಮಾಯಣ ಮತ್ತು ಮಹಾಭಾರತ ಮಾತ್ರ 18 ಅಧ್ಯಾಯಗಳಲ್ಲಿ ಪರಿಚಯ ಮಾಡಿಕೊಂಡಿತ್ತು. ಆದರೆ ಇಂದು ಒಮ್ಮೆಲೆ ಪುಸ್ತಕಗಳ ಲೋಕಾರ್ಪಣೆಗೊಂಡಿರುವುದು ಬಹುಮುಖ್ಯವಾದ ಸಂಗತಿಯಾಗಿದೆ. ವಿದ್ಯಾರ್ಥಿಗಳು ಆಧುನಿಕ ದೃಷ್ಟಿಕೋನಗಳಲ್ಲಿ…
ಮುಂದೆ ಓದಿ..