ಶಾರದಾ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತಿ–ಧರ್ಮ–ಕ್ರೀಡೆಗೆ ಸಮನ್ವಯಿತ ಒತ್ತು: ಯದುವೀರ್ ಒಡೆಯರ್ ಪ್ರಶಂಸೆ
ಶಾರದಾ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತಿ–ಧರ್ಮ–ಕ್ರೀಡೆಗೆ ಸಮನ್ವಯಿತ ಒತ್ತು: ಯದುವೀರ್ ಒಡೆಯರ್ ಪ್ರಶಂಸೆ ಮಂಗಳೂರು: ಶಾರದಾ ವಿದ್ಯಾಸಂಸ್ಥೆಯಲ್ಲಿ ಶಿಸ್ತಿನ ಶಿಕ್ಷಣ ವ್ಯವಸ್ಥೆಯೊಂದಿಗೆ ಧರ್ಮ ಪಾಲನೆ, ಸಂಸ್ಕೃತಿ ಸಂರಕ್ಷಣೆ ಹಾಗೂ ದೇಸಿ ಕ್ರೀಡೆಗಳಿಗೆ ಉತ್ತೇಜನ ನೀಡುವ ಮೂಲಕ ಮಕ್ಕಳಲ್ಲಿ ಜಾಗೃತಿ ಮತ್ತು ರಾಷ್ಟ್ರಭಕ್ತಿ ಬೆಳೆಸುವ ಮಹತ್ವದ ಕಾರ್ಯ ನಡೆಯುತ್ತಿದೆ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪರಂಪರೆಯ ಹೃದಯಭಾಗ ಮೈಸೂರಾದರೆ, ಅದರ ಬೆನ್ನೆಲುಬು ಕರಾವಳಿ ಪ್ರದೇಶವಾಗಿದೆ ಎಂದು ಅಭಿಪ್ರಾಯಪಟ್ಟರು. ಕರಾವಳಿಯಲ್ಲಿ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯ ಕಾರ್ಯ ನಿರಂತರವಾಗಿ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು. ತಮ್ಮ ಸಾಮರ್ಥ್ಯ ಮೀರಿಯೂ ಸಮಾಜಕ್ಕಾಗಿ ದುಡಿಯುವ ಮನೋಭಾವವೇ ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ…
ಮುಂದೆ ಓದಿ..
