ನಮ್ಮ ತಪ್ಪುಗಳ ಆತ್ಮಾವಲೋಕನವೂ ಆಗಲಿ…….
ಕಾಲ್ತುಳಿತದ ಸಾವುಗಳಿಗೆ ಸರ್ಕಾರದ ತಪ್ಪು, ಕೆ ಎಸ್ ಸಿ ಎ ತಪ್ಪು, ಆರ್‌ಸಿಬಿ ಫ್ರಾಂಚೈಸಿ ತಪ್ಪು, ಪೊಲೀಸರ ತಪ್ಪು, ಮಾಧ್ಯಮಗಳ ತಪ್ಪು, ಆಟಗಾರರ ತಪ್ಪು, ಇವುಗಳ ನಡುವೆ ಇನ್ನೊಂದು ದೊಡ್ಡ ತಪ್ಪನ್ನು ಮರೆಯಬಾರದು. ಈ ಅವಘಡದ ಮತ್ತೊಂದು ಮುಖ……. 20/30 ವರ್ಷದ ಒಳಗಿನ ಯುವಕ ಯುವತಿಯರಿಗೆ ವಿದ್ಯುತ್ ಕಂಬದ ಮೇಲೆ ನಿಂತು ಖ್ಯಾತ ಕ್ರೀಡಾಪಟುವನ್ನೋ, ಸಿನಿಮಾ ನಟನನ್ನೋ, ರಾಜಕೀಯ ವ್ಯಕ್ತಿಯನ್ನೋ ನೋಡುವ ದುಸ್ಸಾಹಸ ಮಾಡಬಾರದು ಎಂಬ ಸಾಮಾನ್ಯ ಪ್ರಜ್ಞೆ ಇಲ್ಲದಿದ್ದರೆ ಹೇಗೆ…..ಅತಿ ಬುದ್ದಿವಂತ ಮುಂದಿನ ಭವಿಷ್ಯದ ಪ್ರಜೆಗಳು ಬುದ್ಧ, ವಿವೇಕಾನಂದ, ಬಸವಣ್ಣ ಗಾಂಧಿ, ಅಂಬೇಡ್ಕರ್, ರಾಣಿ ಚೆನ್ನಮ್ಮ, ರಾಯಣ್ಣ, ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಮುಂತಾದವರ ಪ್ರತಿಮೆಗಳ ತಲೆಯ ಮೇಲೆ ನಿಂತು ಸಿಗರೇಟು ಸೇದುತ್ತಾ ಕೋತಿಗಳಂತೆ ದಾರಿಯಲ್ಲಿ ಸಾಗುವ ಮೆರವಣಿಗೆ ವೀಕ್ಷಿಸಿದರೆ ಹೇಗೆ……ಇಂಜಿನಿಯರಿಂಗ್, ಡಾಕ್ಟರ್, ಪದವಿ, ಸ್ನಾತಕೋತ್ತರ, ಡಿಪ್ಲೋಮೋ ಮುಂತಾದ ಕಾಲೇಜುಗಳಲ್ಲಿ ಓದುತ್ತಿರುವ ಹುಡುಗರಿಗೆ ಸಮುದ್ರ ತೀರದಲ್ಲಿ…
ಮುಂದೆ ಓದಿ..
