ದೇವರು ಮತ್ತು ಮನುಷ್ಯ….. ಇದ್ದರೆ ಇರಲಿ ಬಿಡಿ ದೇವರು ನಮಗೇನು……
ದೇವರು ಮತ್ತು ಮನುಷ್ಯ….. ಇದ್ದರೆ ಇರಲಿ ಬಿಡಿ ದೇವರು ನಮಗೇನು…… ನಾವು ವಂಚಕರಲ್ಲ, ಭ್ರಷ್ಟರಲ್ಲ, ಮೋಸಗಾರರಲ್ಲ, ಕಳ್ಳ ಖದೀಮರಲ್ಲ……. ದೇವರಿದ್ದರೆ ನಮಗೇ ಒಳ್ಳೆಯದು….. ನಾವು ಬೇರೆಯವರ ಆಸ್ತಿಗೆ ಹೊಂಚು ಹಾಕುವವರಲ್ಲ, ಬೇರೆಯವರನ್ನು ಹಿಂಸಿಸುವವರಲ್ಲ, ಭೂಮಿ ಬಗೆಯುವವರಲ್ಲ,….. ದೇವರು ಸರ್ವ ಶಕ್ತನಾಗಿದ್ದರೆ ತನಿಖೆ ಮಾಡಿಕೊಳ್ಳಲಿ ಬಿಡಿ…. ನಾವು ಪೂಜೆ ಮಾಡುವುದಿಲ್ಲ, ನಮಾಜು ಮಾಡುವುದಿಲ್ಲ, ಪ್ರಾರ್ಥನೆ ಮಾಡುವುದಿಲ್ಲ…. ಹಸಿದವರಿಗೆ ಅನ್ನ ನೀಡುತ್ತೇವೆ,ಅಗತ್ಯವಿದ್ದವರಿಗೆ ಬಟ್ಟೆ ನೀಡುತ್ತೇವೆ,ಅವಶ್ಯಕತೆ ಇದ್ದವರಿಗೆ ರಕ್ತವನ್ನೂ ನೀಡುತ್ತೇವೆ….. ನಾವು ಮಸೀದಿಗೆ ಹೋಗುವುದಿಲ್ಲ,ನಾವು ದೇವಸ್ಥಾನಕ್ಕೆ ಹೋಗುವುದಿಲ್ಲ,ನಾವು ಚರ್ಚಿಗೂ ಹೋಗುವುದಿಲ್ಲ….. ವೃದ್ದಾಶ್ರಮಕ್ಕೆ ಹೋಗುತ್ತೇವೆ ಸಾಂತ್ವನ ಹೇಳಲು,ಅನಾಥಾಶ್ರಮಕ್ಕೆ ಹೋಗುತ್ತೇವೆ ಸಹಾಯ ಮಾಡಲು,ಆಸ್ಪತ್ರೆಗಳಿಗೆ ಹೋಗುತ್ತೇವೆ ಸೇವೆ ಮಾಡಲು…. ದೇವರಿಗೆ ಏನನ್ನೂ ಕೊಡುವುದಿಲ್ಲ,ದೇವರಲ್ಲಿ ಏನನ್ನೂ ಬೇಡುವುದಿಲ್ಲ,ದೇವರಿಗಾಗಿ ಕೊಲ್ಲುವುದೂ ಇಲ್ಲ….. ಮನುಷ್ಯರಿಗಾಗಿ ಬದುಕುತ್ತೇವೆ,ಮನುಷ್ಯರಿಗಾಗಿ ಕೊಡುತ್ತೇವೆ,ಮನುಷ್ಯರಿಗಾಗಿಯೇ ಜೀವಿಸುತ್ತೇವೆ….. ದೇವರನ್ನು ಪ್ರೀತಿಸುವುದಿಲ್ಲ, ದೇವರನ್ನು ದ್ವೇಷಿಸುವುದಿಲ್ಲ,ದೇವರನ್ನು ಹುಡುಕಾಡುವುದಿಲ್ಲ….. ಮನುಷ್ಯರನ್ನು ಪ್ರೀತಿಸುತ್ತೇವೆ,ಮನುಷ್ಯರನ್ನು ಗೌರವಿಸುತ್ತೇವೆ,ಮನುಷ್ಯತ್ವವನ್ನೇ ಹುಡುಕುತ್ತೇವೆ….. ಮನುಷ್ಯ ಮತ್ತು ದೇವರಲ್ಲಿ ನಮ್ಮ ಆಯ್ಕೆ ಮನುಷ್ಯ…
ಮುಂದೆ ಓದಿ..
