ಮಧ್ಯರಾತ್ರಿ ಯುವತಿಯ ಮನೆ ಮೇಲೆ ದಾಳಿ: ಮಾಜಿ ಪ್ರೇಮಿಯಿಂದ ಕಿರುಕುಳ, ಹಲ್ಲೆ ಯತ್ನ..
ಒಂದು ಕಾಲದ ಪ್ರೇಮಿ ಮಧ್ಯರಾತ್ರಿ ಯುವತಿಯ ಮನೆಗೆ ನುಗ್ಗಿ ಕಿರುಕುಳ ನೀಡಿದ ಹಾಗೂ ಹಲ್ಲೆ ಮಾಡಲು ಯತ್ನಿಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಪಟ್ಟಂತೆ ಯುವತಿ ವೈಷ್ಣವಿ ಅವರು ಹನುಮಂತನಗರದ ಪೊಲೀಸರಿಗೆ ದೂರು ನೀಡಿದ್ದು, ಯೋಗೇಶ್ ಎಂಬಾತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ವೈಷ್ಣವಿಯವರ ಮಾಹಿತಿ ಪ್ರಕಾರ, ವೈಷ್ಣವಿ ಮತ್ತು ಯೋಗೇಶ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಯೋಗೇಶ್ ನಡತೆ ಸರಿ ಇಲ್ಲದ ಕಾರಣ ಸಂಬಂಧ ಮುರಿದುಕೊಳ್ಳಲಾಯಿತು. ಈ ಹಿನ್ನೆಲೆಯಲ್ಲಿ ಯೋಗೇಶ್ ನಿರಂತರವಾಗಿ ವಿವಿಧ ಅಪರಿಚಿತ ನಂಬರ್ಗಳಿಂದ ಕರೆಮಾಡಿ ಅವಳಿಗೆ ಕಿರುಕುಳ ನೀಡುತ್ತಿದ್ದನು. ದಿನಾಂಕ 20ರಂದು ರಾತ್ರಿ ಸುಮಾರು 12:30ರ ಸುಮಾರಿಗೆ, ಯೋಗೇಶ್ ವೈಷ್ಣವಿಯ ಮನೆಯ ಬಳಿಗೆ ಬಂದು ಜೋರಾಗಿ ಕೂಗಾಡುತ್ತಿದ್ದನು. ಈ ವಿಷಯವನ್ನು ತಾಯಿ ಗಮನಿಸಿದಾಗ, ಯಾಕೆ ಗಲಾಟೆ ಮಾಡುತ್ತಿದ್ದೀಯಾ ಎಂದು ಕೇಳಿದಕ್ಕೆ ಅವನು ಅವಾಚ್ಯ ಶಬ್ದಗಳಿಂದ ಬೈದು, ಸಮೀಪದಲ್ಲಿದ್ದ ಕಲ್ಲಿನಿಂದ ವೈಷ್ಣವಿಯ…
ಮುಂದೆ ಓದಿ..
