ಕಂಪ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಕಂಪ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಕಂಪ್ಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ ಅತಿಥಿಗೃಹದ ಆವರಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎನ್. ವೀರಭದ್ರಗೌಡ, ಸಮಾಜದ ಧ್ವನಿಯಾಗಿ ಪತ್ರಕರ್ತರು ಮಹತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದ ಅನೇಕ ಪತ್ರಕರ್ತರು ಜೀವನ ಭದ್ರತೆಯ ಕೊರತೆಯ ನಡುವೆಯೂ ಸಂಕಷ್ಟಗಳನ್ನು ಎದುರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಮಾಜದಲ್ಲಿನ ಅಸಮಾನತೆಗಳು, ಅಕ್ರಮಗಳು ಹಾಗೂ ಸರ್ಕಾರ ಮತ್ತು ಜನಪ್ರತಿನಿಧಿಗಳ ಕಾರ್ಯವೈಖರಿಯ ಕುರಿತು ಜನಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಬರಹಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹೇಳಿದರು. ಚುನಾವಣೆಯಲ್ಲಿ ತಾಲೂಕು ಘಟಕದ ಅಧ್ಯಕ್ಷರಾಗಿ ಬಂಗಿ ದೊಡ್ಡ ಮಂಜುನಾಥ, ಉಪಾಧ್ಯಕ್ಷರಾಗಿ ಕರಿ ವಿರುಪಾಕ್ಷಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ವೀರೇಶ್, ಕಾರ್ಯದರ್ಶಿಯಾಗಿ ಎಸ್.…
ಮುಂದೆ ಓದಿ..
