ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ವಿತರಣೆ
ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ವಿತರಣೆ ಕಡಬ: ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ಕ್ಲಾಸ್ ಆನ್ ವ್ಹೀಲ್ಸ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ ಶಾಲೆಗೆ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಖಾಸಗಿ ಶಾಲೆಗಳಂತೆ ಕಂಪ್ಯೂಟರ್ ಪ್ರಯೋಗಾಲಯಗಳನ್ನು ಸ್ಥಾಪಿಸುವುದು ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ಸವಾಲಾಗಿರುವುದನ್ನು ಮನಗಂಡು, ಬಸ್ ಮೂಲಕವೇ ಶಾಲೆಗಳ ಅಂಗಳಕ್ಕೆ ಬಂದು ಮೂಲಭೂತ ಕಂಪ್ಯೂಟರ್ ಶಿಕ್ಷಣ ನೀಡುತ್ತಿರುವ ಈ ಯೋಜನೆ ಮಾದರಿಯೂ ವಿಶಿಷ್ಟವೂ ಆಗಿದೆ ಎಂದು ಅವರು ಪ್ರಶಂಸಿಸಿದರು. ತಾವು ವಿದ್ಯಾಭ್ಯಾಸ ಮಾಡಿದ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿರುವ ಸುಜಾಹ್ ಮುಹಮ್ಮದ್ ಅವರ ನಡೆ ಅನುಕರಣೀಯವಾಗಿದ್ದು, ಇಂತಹ ಮನೋಭಾವ ಹೆಚ್ಚಾದರೆ ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ…
ಮುಂದೆ ಓದಿ..
