ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಸಚಿವಾಲಯ ಅಗತ್ಯ: ಶಾಸಕ ಬಿ.ಆರ್. ಪಾಟೀಲ್
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಸಚಿವಾಲಯ ಅಗತ್ಯ: ಶಾಸಕ ಬಿ.ಆರ್. ಪಾಟೀಲ್ ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಶಾಸಕ ಬಿ.ಆರ್. ಪಾಟೀಲ್ ಅವರು ವಿಧಾನಸಭೆಯಲ್ಲಿ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕಾಗಿ ರಚಿಸಲಿರುವ ಸಚಿವಾಲಯದ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಅಲ್ಲದೆ ಕಲಬುರಗಿಯಲ್ಲಿ ಸ್ಥಾಪಿಸಬೇಕು. ಇದರಿಂದ ಆಡಳಿತ ಕಾರ್ಯಗಳು ಸ್ಥಳೀಯವಾಗಿ ನಡೆಯಲು ಸಾಧ್ಯವಾಗಿದ್ದು, ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರವು ಪ್ರತಿ ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿರುವುದು ಸ್ವಾಗತಾರ್ಹವಾದ ಕ್ರಮವಾಗಿದೆ. ಆದರೆ ಕಲಬುರಗಿ ಭಾಗದಲ್ಲಿ ಹೈನುಗಾರಿಕೆಗೆ ಇನ್ನಷ್ಟು ಉತ್ತೇಜನ ನೀಡಬೇಕಿದೆ. ಹಾಲು ಉತ್ಪಾದನೆ ಹೆಚ್ಚಿದರೆ ರೈತರು ಹಾಗೂ ಹೈನುಗಾರಿಕೆ ಅವಲಂಬಿತರ ಆದಾಯ ಹೆಚ್ಚಾಗಲಿದೆ. ಜೊತೆಗೆ ಕುರಿ ಮತ್ತು…
ಮುಂದೆ ಓದಿ..
